
ತುಮಕೂರು: ಮನೆ ಪಾಠ ಹೇಳಿಕೊಡಲು ಬಂದಿದ್ದ ಶಿಕ್ಷಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಧುಗಿರಿ ಸಮೀಪದ ಎಂಎಸ್ ಗೊಲ್ಲಹಳ್ಳಿಯ ಬಾಲಕಿಗೆ ಅನಾರೋಗ್ಯ ಉಂಟಾಗಿದ್ದ ಕಾರಣ ಆಕೆಯ ತಾಯಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದು, ಬಾಲಕಿಯೊಂದಿಗೆ ಸಮಾಲೋಚನೆ ನಡೆಸಿದ್ದಾರೆ. 5 ತಿಂಗಳ ಹಿಂದೆ ಪಾಠ ಹೇಳಿಕೊಡಲು ಮನೆಗೆ ಬರುತ್ತಿದ್ದ ಸಂಜೀಪುರದ ರಂಗಯ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಡವನಹಳ್ಳಿ ಠಾಣೆಗೆ ದೂರು ನೀಡಲಾಗಿದೆ.