
ಧಾರವಾಡ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿ ಧಾರವಡ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ಕೋರ್ಟ್ ಆದೇಶ ಹೊರಡಿಸಿದೆ.
ಅಪರಾಧಿ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ, ಅತ್ಯಾಚಾರವೆಸಗಿದ್ದ. ಅಪರದಹಿಗೆ 11 ವರ್ಷ ಜೈಲು ಶಿಕ್ಷೆ ಹಾಗೂ 55 ಸಾವಿರ ದಂಡ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಅಲ್ಲದೇ ಕಾನೂನು ನಿರ್ವಹಣಾ ಪ್ರಾಧಿಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಹಾಗೂ ಅಪರಾಧಿಗೆ ವಿಧಿಸಿರುವ ದಂಡದ 55 ಸಾವಿರ ರೂನಲ್ಲಿ 50 ಸಾವಿರ ರೂ ಬಾಲಕಿಗೆ ಪರಿಹಾರ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.
2022ರ ಜುಲೈ 5ರಂದು ಧಾರವಾಡ ತಾಲೂಕಿನ ಹೊರವಲಯದಲ್ಲಿ ಅಪ್ರಾಪ್ತೆಯ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದು, ಕೃತ್ಯದ ಬಳಿಕ ವಿಷಯ ಬಾಯ್ಬಿಟ್ಟರೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಸಿದ್ದ. ಸತತ ನಾಲ್ಕು ಬಾರಿ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದ. ಬಾಲಕಿ 7ತಿಂಗಳ ಗರ್ಭಿಣಿಯಾಗಿದ್ದಾಗ ಹೆರಿಗೆಯಾಗಿದ್ದಳು. ಅಲ್ಲದೇ ಆರೋಪಿ ಬೇರೊಬ್ಬನ ಹೆಸರು ಹೇಳುವಂತೆ ಬಾಲಕಿಗೆ ಹಿಂಸಿಸಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಾಲಕಿ ಪೊಲೀಸರ ಮುಂದೆ ಘಟನೆಯ ಬಗ್ಗೆ ವಿವರಿಸಿದ್ದಳು. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.