ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಜುಲೈ 15ರಂದು ಸಂಬಂಧಿಕರ ಮನೆಗೆ ಹೋಗುವುದಾಗಿ ಬಾಲಕಿ ಹೇಳಿ ಹೋಗಿದ್ದಳು. ಇಂದು ಗ್ರಾಮದ ಹೊರ ವಲಯದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಯಲ್ಲಿ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಆಳಂದ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.