ಬಳ್ಳಾರಿ: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ಸಂಡೂರು ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಸೋಮವಾರ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾರ್ಖಾನೆಯೊಂದರಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಜಾರ್ಖಂಡ್ ಮೂಲದ ದಂಪತಿ ಕೆಲಸಕ್ಕೆ ಹೋಗಿದ್ದ ವೇಳೆ ಅವರ ಐದು ವರ್ಷದ ಪುತ್ರಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಸಿಸಿ ಕ್ಯಾಮೆರಾದಲ್ಲಿ ಬಾಲಕಿಯನ್ನು ಕರೆದೊಯ್ಯುತ್ತಿರುವ ದೃಶ್ಯ ಸೆರೆಯಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರ 3 ವಿಶೇಷ ತಂಡಗಳನ್ನು ರಚಿಸಲಾಗಿದೆ.