ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023 -24ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸರ್ಕಾರಿ ಕೋಟಾ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಅದನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿದೇಶದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವವರಿಗೆ ನೀಡುವ 20 ಲಕ್ಷ ರೂ. ಶೈಕ್ಷಣಿಕ ಸಾಲದ ಮೊತ್ತವನ್ನು 30 ಲಕ್ಷ ರೂ.ಗೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ಸಚಿವರು ತಿಳಿಸಿದ್ದಾರೆ.