alex Certify ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಚಿವ ಜಮೀರ್ ಅಹಮ್ಮದ್ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಚಿವ ಜಮೀರ್ ಅಹಮ್ಮದ್ ಗುಡ್ ನ್ಯೂಸ್

ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023 -24ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸರ್ಕಾರಿ ಕೋಟಾ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಅದನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿದೇಶದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವವರಿಗೆ ನೀಡುವ 20 ಲಕ್ಷ ರೂ. ಶೈಕ್ಷಣಿಕ ಸಾಲದ ಮೊತ್ತವನ್ನು 30 ಲಕ್ಷ ರೂ.ಗೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...