ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ(ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿಬಿಎಸ್ಸಿ) ಗಳ 2023-24 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವೇಶ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇ. 75 ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದ್ದು, ಇದರಲ್ಲಿ ಬಾಲಕಿಯರಿಗೆ ಶೇ. 50 ರಷ್ಟು ಸ್ಥಾನಗಳು ಮೀಸಲಿಡಲಾಗಿದೆ.
ಈಗಾಗಲೇ ಏಪ್ರಿಲ್ 27 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ 2023ರ ಮೇ 13 ರಂದು ಕೊನೆಯ ದಿನವಾಗಿದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು/ ವಿದ್ಯಾರ್ಥಿಗಳ ಪಾಲಕರು, ಸೇವಾ ಸಿಂಧು ಪೋರ್ಟಲ್ https:// sevasindhuservices.karnataka.gov.in ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಉಚಿತ ಸೇವೆ ಪಡೆಯಲು ತಮ್ಮ ಸಮೀಪದ ಅಲ್ಪಸಂಖ್ಯಾತರ ತಾಲೂಕಾ ಮಾಹಿತಿ ಕೇಂದ್ರವನ್ನು ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಥವಾ ತಾಲೂಕು ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿಗಳ ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಬಹುದು.