ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳು ಮೆಟ್ರಿಕ್ ಪೂವ್ ವಿದ್ಯಾರ್ಥಿ ವೇತನ 1 ರಿಂದ 10 ನೇ ತರಗತಿ)/ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ(ಪಿಯುಸಿ ಯಿಂದ ಪಿಎಚ್‍ಡಿ) ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನ ಪಡೆಯಲು ನವೀಕರಣ, ಹೊಸ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್‍ಲೈನ್ http://www.scholaships.gov.in ನಲ್ಲಿ ಅರ್ಜಿ ಸಲ್ಲಿಸುವುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್, 15 ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರ /ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ(ಶೇ.50ರಷ್ಟು ಮೇಲ್ಪಟ್ಟು), ಪ್ರಸಕ್ತ ವರ್ಷದ(2021-22) ಶುಲ್ಕ ರಶೀತಿ, ವಿದ್ಯಾರ್ಥಿಯ ಭಾವಚಿತ್ರ, ವಿದ್ಯಾರ್ಥಿಯ ಬ್ಯಾಂಕ್ ಖಾತೆ ಸಂಖ್ಯೆ ಪಾಸ್ ಪುಸ್ತಕ ನಕಲು ಪ್ರತಿ ಹಾಗೂ ಆಧಾರ್ ಕಾರ್ಡ್ ಸಲ್ಲಿಸಬೇಕು.
ಹಿಂದಿನ ವರ್ಷದಲ್ಲಿ ಕನಿಷ್ಠ ಶೇ.50ಕ್ಕಿಂತ ಹೆಚ್ಚಿನ ಅಂಕದಲ್ಲಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಗರಿಷ್ಠ ರೂ.1 ಲಕ್ಷ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ, 2 ಲಕ್ಷ ರೂ. ಮೆಟ್ರಿಕ್ ನಂತರದ ಹಾಗೂ 2.50 ಲಕ್ಷ ರೂ.ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ನಿಗಧಿಪಡಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದವರಾಗಿದ್ದು, ಅಲ್ಪಸಂಖ್ಯಾತರ ಸಮುದಾಯದವರಾಗಿರಬೇಕು. ಮೆಟ್ರಿಕ್ ಪೂರ್ವ ಅರ್ಜಿಗಳ ಒಂದು ಪ್ರತಿಯನ್ನು ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಆಯಾಯ ಶಾಲೆಗೆ ಸಲ್ಲಿಸುವುದು ಹಾಗೂ ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ ಮೀನ್ಸ್ ಅರ್ಜಿಗಳ ಒಂದು ಪ್ರತಿ ಆಯಾಯ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಕಾಲೇಜು ಇರುವ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ https://dom.karnataka.gov.xn--in-2vha9jyc/ ಹಾಗೂ ದೂ.ಸಂ.08272-225528/ 220214 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹೇಳಲಾಗಿದೆ.