ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಅರಿವು(ಸಿ.ಇ.ಟಿ/ ನೀಟ್) ವಿದ್ಯಾಭ್ಯಾಸ ಸಾಲ ಯೋಜನೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ತಾಂತ್ರಿಕ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಸಿಗಲಿದೆ.
ನಿಗಮದಿಂದ ಸಿ.ಇ.ಟಿ/ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಎಂಜಿನಿಯರಿಂಗ್/ ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್‍ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸಿ, ಸಾಲಕ್ಕೆ ಶೇ.2 ರಂತೆ ಸೇವಾ ಶುಲ್ಕ ಪಡೆಯಲಾಗುವುದು. ಅರ್ಜಿದಾರರ ವಾರ್ಷಿಕ ಆದಾಯ 8 ಲಕ್ಷ ರೂ.ಗಳ ಒಳಗಿರಬೇಕು. ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್ ಮುಖೇನ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ನಿಗಮದ ವೆಬ್‍ಸೈಟ್ https://kmdconline.karnataka.gov.in// ಕಚೇರಿ ದೂರವಾಣಿ ಸಂಖ್ಯೆ: 08272-220449, ಅರಿವು (ಸಿ.ಇ.ಟಿ/ ನೀಟ್) ಸಾಲ ಯೋಜನೆಗೆ ಆನ್‍ಲೈನ್ ನಲ್ಲಿ ಭರ್ತಿ ಮಾಡಿದ ಅರ್ಜಿ, ವಿದ್ಯಾರ್ಥಿಯ 4 ಭಾವಚಿತ್ರ ಹಾಗೂ ಪೋಷಕರ 2+2 ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಸಿ.ಇ.ಟಿ/ ನೀಟ್ ಪ್ರವೇಶ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಡಿಪ್ಲೋಮ/ ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ನೋಟರಿ ಮೂಲಕ 50 ರೂ ಬಾಂಡ್ ಕಾಗದದಲ್ಲಿ ನೋಟರಿ ಅವರಿಂದ ದೃಢೀಕರಿಸಿ ಸಲ್ಲಿಸಬೇಕು. ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ ಹಾಗೂ ಪೋಷಕರ ಸ್ವಯಂ ಘೋಷನೆ ಪತ್ರ ಸಲ್ಲಿಸಬೇಕು.
ಈ ಯೋಜನೆಯ ಲಾಭ ಪಡೆಯಲು ಆನ್‍ಲೈನ್‍ನ ಮುಖೇನ ವಿದ್ಯಾರ್ಥಿಗಳು ಮಾಹಿತಿ ಭರ್ತಿಮಾಡಿ, ಸಾಪ್ಟ್ ಕಾಫಿ ಯನ್ನು ಎರಡು ಪ್ರತಿಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ಈ ವಿಳಾಸಕ್ಕೆ ಪ್ರಿಂಟೌಟ್ ಪಡೆದ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ. ಅರ್ಜಿಯನ್ನು ಸಲ್ಲಿಸಲು ಕೆಇಎ ಕೌನ್ಸೆಲಿಂಗ್ ಮುಗಿದ ನಂತರ ಕೊನೆಯ ದಿನಾಂಕವೆಂದು ನಿಗಧಿಪಡಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-220449, 8971282932 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.