
ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಬದಲಿಗೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಇದೇ ಹೊತ್ತಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಕಾಂಗ್ರೆಸ್, ಮಂಗಳೂರು ಉಳ್ಳಾಲ ಶಾಶಕ ಯು.ಟಿ. ಖಾದರ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನೇಮಕ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಬಗ್ಗೆ ಆದೇಶ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಯು.ಟಿ. ಖಾದರ್ ಅವರನ್ನು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನ ಕೈತಪ್ಪಿದ್ದಕ್ಕೆ ಸಿ.ಎಂ. ಇಬ್ರಾಹಿಂ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ. ಮುಸ್ಲಿಂ ಶಾಸಕರಿಗೆ ಅವಕಾಶ ನೀಡಿಲ್ಲ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ನಲ್ಲಿ ಅನ್ಯಾಯವಾಗುತ್ತಿದೆ ಎನ್ನುವ ಬಗ್ಗೆ ಇಬ್ರಾಹಿಂ ಪ್ರಸ್ತಾಪಿಸಿದ್ದರು. ಈಗ ಡ್ಯಾಮೇಜ್ ಕಂಟ್ರೋಲ್ ಗೆ ಕಾಂಗ್ರೆಸ್ ಮುಂದಾಗಿದ್ದು, ಖಾದರ್ ಅವರನ್ನು ಉಪನಾಯಕನ ಸ್ಥಾನಕ್ಕೆ ನೇಮಕ ಮಾಡಲಾಗಿದೆ.