alex Certify 6ನೇ ತರಗತಿ ಸೇರ್ಪಡೆಗೆ ಮೇ 19ರಂದು ಪ್ರವೇಶ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6ನೇ ತರಗತಿ ಸೇರ್ಪಡೆಗೆ ಮೇ 19ರಂದು ಪ್ರವೇಶ ಪರೀಕ್ಷೆ

ಧಾರವಾಡ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6 ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮೇ 19, 2024 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆಯನ್ನು ಧಾರವಾಡದ ಅಂಜುಮನ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜನಲ್ಲಿ ನಡೆಸಲಾಗುವುದು.

ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಮೇ 13 ರಿಂದ ಮೇ 17, 2024 ರೊಳಗಾಗಿ ಹುಬ್ಬಳ್ಳಿ ಅಂಚಟಗೇರಿಯ ಅಲ್ಪಸಂಖ್ಯಾತರ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ಪಡೆದುಕೊಂಡು ಮೇ 19, 2024 ರಂದು ಬೆಳಿಗ್ಗೆ 10 ಘಂಟೆಯೊಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...