ಬೆಂಗಳೂರು: ಅಪ್ರಾಪ್ತ ಅಣ್ಣನಿಂದಲೇ ಸಹೋದರಿ ಮೂರು ತಿಂಗಳ ಗರ್ಭಿಣಿಯಾದ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
14 ವರ್ಷದ ಅವಳಿ ಜವಳಿ ಮಕ್ಕಳಾಗಿದ್ದ ಅಣ್ಣ ಮತ್ತು ತಂಗಿ ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ್ದಾರೆ. ಬಳಿಕ ಅಪ್ರಾಪ್ತ ವಯಸ್ಸಿನ ಅಣ್ಣ, ತಂಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ. ಹೊಟ್ಟೆ ನೋವು ಎಂದು ಅಪ್ರಾಪ್ತ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪರೀಕ್ಷೆ ನಡೆಸಿದ್ದಾಗ ಮೂರು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ನಂತರ ಖಾಸಗಿ ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಿಸಿ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಸಂತ್ರಸ್ತ ಬಾಲಕಿಯನ್ನು ಖಾಸಗಿ ಆಸ್ಪತ್ರೆಯಿಂದ ವಾಣಿವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.