alex Certify ಅನುಮಾನಾಸ್ಪದ ರೀತಿಯಲ್ಲಿ ಯುವ ನಟನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಮಾನಾಸ್ಪದ ರೀತಿಯಲ್ಲಿ ಯುವ ನಟನ ಸಾವು

ಯುವ ನಟನೊಬ್ಬ ತನ್ನ ನಿವಾಸದಲ್ಲಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.

‘ಮಿರ್ಜಾಪುರ್’ ಹಿಂದಿ ವೆಬ್ ಸರಣಿಯಲ್ಲಿ ಅತ್ಯುತ್ತಮ ಅಭಿನಯದ ಮೂಲಕ ಮನೆಮಾತಾಗಿದ್ದ ನಟ 36 ವರ್ಷದ ಬ್ರಹ್ಮ ಮಿಶ್ರಾ ಸಾವನ್ನಪ್ಪಿದವರಾಗಿದ್ದಾರೆ.

ಗುರುವಾರ ಬೆಳಗ್ಗೆ ಬಾತ್ರೂಮಿನಲ್ಲಿ ಬ್ರಹ್ಮ ಮಿಶ್ರಾ ಅವರ ಶವ ಪತ್ತೆಯಾಗಿದ್ದು, ಅವರು ನಿವಾಸದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿರುವ ಪೊಲೀಸರು, ಮೇಲ್ನೋಟಕ್ಕೆ ಇದು ಹೃದಯಾಘಾತದಿಂದ ಸಂಭವಿಸಿರುವ ಸಾವು ಎಂಬಂತೆ ಕಂಡು ಬರುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...