ಬೆಂಗಳೂರು: ಬೆಂಗಳೂರಿನಲ್ಲಿ ಶಿವಕುಮಾರ ಸ್ವಾಮೀಜಿ ಪ್ರತಿಮೆ ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ನವೆಂಬರ್ 30ರಂದು ಗಿರಿನಗರ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಘಟನೆ ನಡೆದಿದ್ದು, ಮಧ್ಯರಾತ್ರಿ ಉದ್ಧವಾದ ಕೋಲಿನಿಂದ ಶ್ರೀಗಳ ಮೂರ್ತಿಯನ್ನು ಆರೋಪಿ ವಿರೂಪಗೊಳಿಸಿದ್ದ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೆ ನಾನು ಮಾನಸಿಕವಾಗಿ ಸರಿ ಇರಲಿಲ್ಲ ಎಂದು ಆತ ಹೇಳಿದ್ದಾನೆ. ಸದ್ಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.