alex Certify ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಸಲ್ಮಾನ್ ಅಲಿಯಾಸ್ ಗೂಡು(24) ಇರಿತಕ್ಕೆ ಒಳಗಾದ ಯುವಕ. ಕೂಡಲೇ ಸಲ್ಮಾನ್ ನನ್ನು ಶಿರಾಳಕೊಪ್ಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಮಾರ್ಚ್ 8ರಂದು ಸಲ್ಮಾನ್ ನಿಶ್ಚಿತಾರ್ಥ ನಿಗದಿಯಾಗಿತ್ತು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಪ್ರಕರಣ ದಾಖಲಿಸಿಕೊಂಡ ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂದು ಶಂಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...