ರಾಮನಗರ : ರಾಮನಗರದಲ್ಲೂ ವಂದೇ ಭಾರತ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದ್ದು, ಕಿಟಕಿ ಗಾಜು ಪುಡಿಪುಡಿಯಾಗಿದೆ.
ಮೈಸೂರಿನಿಂದ ಚೆನ್ನೈಗೆ ತೆರಳುತ್ತಿದ್ದ ವಂವೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ರಾಮನಗರದ ಹೊರವಲಯದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಪರಿಣಾಮ ಕಿಟಕಿಯ ಗಾಜುಗಳು ಪುಡಿ ಪುಡಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಡೆದಿತ್ತು.ಧಾರವಾಡ-ಬೆಂಗಳೂರಿನ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕೆಲ ದಿನಗಳ ಹಿಂದೆ ಅಷ್ಟೇ ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಈ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ಬೀರೂರು-ಅರಸೀಕರೆ ನಡುವೆ ಸಂಚರಿಸುತ್ತಿದ್ದ ವೇಳೆ ಕಿಡಿಗೇಡಿಗಳು ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು ತೂರಾಟ ನಡೆಸಿದ್ದರು.
ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಇತ್ತೀಚೆಗೆ ಚಾಲನೆ ನೀಡಿದ್ದರು.. ಏಕಕಾಲದಲ್ಲಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಚಾಲನೆ ಸಿಕ್ಕಿತ್ತು. .ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ವರ್ಚುವಲ್ ಮೂಲಕ ಚಾಲನೆ ನೀಡಿದ್ದರು.