alex Certify BIG NEWS: ತಪ್ಪಿದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಟಿಕೆಟ್; ಬಿಜೆಪಿ ನಿಲುವಿನಿಂದ ವಿಚಲಿತರಾದ ರಘುಪತಿ ಭಟ್ ರಿಂದ ಸುದೀರ್ಘ ಪೋಸ್ಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಪ್ಪಿದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಟಿಕೆಟ್; ಬಿಜೆಪಿ ನಿಲುವಿನಿಂದ ವಿಚಲಿತರಾದ ರಘುಪತಿ ಭಟ್ ರಿಂದ ಸುದೀರ್ಘ ಪೋಸ್ಟ್…!

ರಘುಪತಿ ಭಟ್ Archives - ವಿಜಯವಾಣಿ

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ವಿಜೇತರಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ನಿಮಗೆ ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು ಎನ್ನಲಾಗಿದೆ.

ಇದೀಗ ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಗೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಆರು ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ತಾನು ಸ್ಪರ್ಧಿಸುತ್ತಿದ್ದು, ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಈ ವಿದ್ಯಮಾನ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ತೀವ್ರ ವಿಚಲಿತರನ್ನಾಗಿ ಮಾಡಿದ್ದು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದಾರೆ. ಅದರ ವಿವರ ಇಂತಿದೆ.

ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.

1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.

ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ.

ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು?

ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ. ಚರ್ಚಿಸೋಣ, ನಿಮ್ಮ ಸಲಹೆಯ ನಿರೀಕ್ಷೆಯಲ್ಲಿ ಎಂದು ರಘುಪತಿ ಭಟ್ ಬರೆದುಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...