alex Certify BIG NEWS: 17 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕನ ಪತ್ತೆಗೆ ಸುಪ್ರೀಂನಿಂದ ತನಿಖಾ ತಂಡ ರಚನೆಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 17 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕನ ಪತ್ತೆಗೆ ಸುಪ್ರೀಂನಿಂದ ತನಿಖಾ ತಂಡ ರಚನೆಗೆ ಆದೇಶ

ನವದೆಹಲಿ: ಸುಮಾರು 17 ವರ್ಷಗಳ ಹಿಂದೆ ನಾಪತ್ತೆಯಾಗಿರುವ ಅಪ್ರಾಪ್ತ ಬಾಲಕನೊಬ್ಬನನ್ನು ಹುಡುಕಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ.

17 ವರ್ಷಗಳಿಂದ ಮಗನನ್ನು ಹುಡುಕಿ ಸುಸ್ತಾದ ತಂದೆ ಮಗನನ್ನು ಹುಡುಕಲು ಪೊಲೀಸರೂ ವಿಫಲವಾದ ಹಿನ್ನೆಲೆಯಲ್ಲಿ ಹೈಕೋರ್ಟ್​ನಲ್ಲಿ ಅವರು ಹೇಬಿಯಸ್​ ಕಾರ್ಪಸ್​ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್​ನಲ್ಲಿ ಅವರ ಅರ್ಜಿ ವಜಾಗೊಂಡಿತ್ತು. ಇದನ್ನು ಪ್ರಶ್ನಿಸಿ ತಂದೆ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದಾರೆ.

ಯಾವುದೋ ಅಪರಾಧ ಪ್ರಕರಣದಲ್ಲಿ ತನ್ನ ಮಗ ಮನೋಜ್​ ಪ್ರಜಾಪತಿಯನ್ನು ಪೊಲೀಸರು ಆರೋಪಿ ಮಾಡಿದ್ದಾರೆ. ಅದಾದ ಮೇಲೆ ಮಗ ಕಾಣೆಯಾಗಿದ್ದು, ಪೊಲೀಸರು ಮಗನನ್ನು ಹುಡುಕುವಲ್ಲಿ ವಿಫಲರಾಗಿದ್ದಾರೆ ಎಂದು ತಂದೆ ದೂರಿದ್ದಾರೆ.

ಈ ಹಿಂದೆ ಈ ಬಗ್ಗೆ ತನಿಖೆ ನಡೆಸುವಂತೆ ಕೋರ್ಟ್​ ಪೊಲೀಸರಿಗೆ ಸೂಚಿಸಿತ್ತು. ಆದರೆ ಪೊಲೀಸರು ಸರಿಯಾದ ತನಿಖೆ ನಡೆಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ.ಟಿ.ರವಿಕುಮಾರ್ ಅವರ ಪೀಠವು, ಸಿಐಟಿ ರಚಿಸಿ ತನಿಖೆ ನಡೆಸುವಂತೆ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...