ಚಿತ್ರದುರ್ಗ: ಮುರುಘಾ ಮಠದ ಮರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ಸೇರಿ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಚಿತ್ರದುರ್ಗದ ಪೊಲೀಸರು ಪ್ರಕರಣದ ತನಿಖೆಗೆ ಸಜ್ಜಾಗುತ್ತಿದ್ದಾರೆ. ಮುರುಘಾ ಶ್ರೀಗಳು ಮುರುಘಾ ಮಠದಲ್ಲೇ ವಾಸ್ತವ್ಯ ಹೂಡಿದ್ದು, ಪ್ರಕರಣದ ಇನ್ನುಳಿದ ಆರೋಪಿಗಳು ಬಹುತೇಕ ನಾಪತ್ತೆಯಾಗಿದ್ದಾರೆ. ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ, ಮಠದ ಉತ್ತರಾಧಿಕಾರಿ ಬಸವಾದಿತ್ಯ, ವಕೀಲ ಗಂಗಾಧರ್ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.