ಮಂಗಳೂರು: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಮದುವೆ ಹಿಂದೂ ಯುವಕನೊಂದಿಗೆ ಮದುವೆಯಾಗಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ.
ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದ ಜೋಡಿ ಹೇಳಿಕೆ ದಾಖಲಿಸಿದ್ದಾರೆ. ಕೊತ್ರೊಟ್ಟು ಸತ್ಯನಾರಾಯಣ ದೇವಾಲಯದಲ್ಲಿ ಮದುವೆಯಾಗಿರುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಟ್ರಾಮಿ ಗ್ರಾಮದ ಹರೀಶ್ ಗೌಡ ಜೊತೆಗೆ ಸುಹಾನಾ ಮದುವೆಯಾಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿ ನಂತರ ಪ್ರೀತಿಸುತ್ತಿದ್ದರು. ಕಂಪ್ಯೂಟರ್ ಕ್ಲಾಸಿಗೆ ಎಂದು ಹೋಗಿದ್ದ ಸುಹಾನಾ ನಾಪತ್ತೆಯಾಗಿದ್ದರು. ಮೂಡಬಿದರೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಸ್ವಇಚ್ಚೆಯಿಂದ ಮದುವೆಯಾಗಿರುವುದಾಗಿ ಸುಹಾನಾ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.