alex Certify ಮಿಷನ್ ವಾತ್ಸಲ್ಯ ಯೋಜನೆ : ಸಂಕಷ್ಟದಲ್ಲಿರುವ ಮಕ್ಕಳ ನೆರವಿಗೆ 1098 ಸಹಾಯವಾಣಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಿಷನ್ ವಾತ್ಸಲ್ಯ ಯೋಜನೆ : ಸಂಕಷ್ಟದಲ್ಲಿರುವ ಮಕ್ಕಳ ನೆರವಿಗೆ 1098 ಸಹಾಯವಾಣಿ ಆರಂಭ

ಚಿತ್ರದುರ್ಗ : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಸಚಿವಾಲಯ ಮಿಷನ್ ವಾತ್ಸಲ್ಯ ಯೋಜನೆಯಡಿ, ಮಕ್ಕಳ ಸಹಾಯವಾಣಿ ಕೇಂದ್ರಗಳನ್ನು ನೇರವಾಗಿ ಕೇಂದ್ರ ಸರ್ಕಾರದಿಂದಲೇ ನಿರ್ವಹಣೆ ಮಾಡಲಿದೆ. ಇದರ ಅಂಗವಾಗಿ ಪ್ರತಿ ಜಿಲ್ಲಾ ಹಂತದಲ್ಲಿಯೂ ಮಕ್ಕಳ ಸಹಾಯವಾಣಿ ಕೇಂದ್ರವನ್ನು ತರೆಯಲಾಗಿದೆ. ಸಂಕಷ್ಟದಲ್ಲಿರುವ ಮಕ್ಕಳಿಗೆ 1098 ಸಹಾಯವಾಣಿ ಮೂಲಕ ಅಗತ್ಯ ನೆರವು ನೀಡಲಾಗುವುದು ಎಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. 

ಶುಕ್ರವಾರ ನಗರದ ಬಾಲಭವನದ ಆವರಣದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಸಹಾಯವಾಣಿ ಕೇಂದ್ರ-1098 ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಎಲ್ಲಾ ವರ್ಗದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ 112 ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯಲ್ಲಿ ಹಲವು ಇಲಾಖೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಗಳನ್ನು ಆರಂಭಿಸಿವೆ. ರಾಷ್ಟ್ರಾದ್ಯಂತ ಸಂಕಷ್ಟದಲ್ಲಿ ಸಿಲುಕಿರುವ ಮಕ್ಕಳ ರಕ್ಷಣೆ, ಪೋಷಣೆ ಮತ್ತು ತುರ್ತು ಸೇವೆಗಳನ್ನು ಒದಗಿಸಲು 1098 ಸಹಾಯವಾಣಿ ಆರಂಭಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿವೆ. ಈ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳು ತಿಳಿದುಕೊಂಡು, ಮಕ್ಕಳಿಗೆ ತಲುಪಿಸುವ ಕಾರ್ಯಮಾಡಬೇಕು. ಇದರಿಂದಾಗಿ ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ಸಹಾಯಕ ದೊರಕಿದಂತೆ ಆಗುತ್ತದೆ ಎಂದರು.

ಬಹುತೇಕ ಸಂದರ್ಭದಲ್ಲಿ ಕುಟುಂಬದ ಸದಸ್ಯರು, ಆಪ್ತರು ಹಾಗೂ ಪರಿಚಿತರಿಂದಲೇ ಮಕ್ಕಳ ಮೇಲೆ ದೌರ್ಜನ್ಯ ಆಗುವ ಸಂಭವವಿದೆ. ಇದು ಅತ್ಯಂತ ಗಾಬರಿಗೊಳಿಸುವ ವಿಷಯವಾಗಿದೆ. ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಅಂಶಗಳು ಬೆಳಕಿಗೆ ಬಂದಾಗ ಆತಂಕ ಹಾಗೂ ನೋವು ಉಂಟಾಗುತ್ತದೆ. ಮಕ್ಕಳಿಗೆ ರಕ್ಷಣಾ ಕವಚದಂತೆ ಇರಬೇಕಾದ ಶಾಲಾ ಕಾಲೇಜುಗಳಲ್ಲಿಯೇ ಈ ರೀತಿ ಘಟನೆಗಳು ನೆಡಯವುದು ವಿಷಾದನೀಯ ಎನಿಸುತ್ತದೆ. ಮಕ್ಕಳಿಗೆ ಅವಶ್ಯ ಇರುವ ಜ್ಞಾನಾರ್ಜನೆ ಹಾಗೂ ಬುದುಕಿಗೆ ದಾರಿ ದೀಪವಾಗಬೇಕಾದ ಶಿಕ್ಷಣ ಸಂಸ್ಥೆಗಳ ವಾತಾವರಣ ಹಾಳಾಗುತ್ತಿರುವುದು ಬೇಸರ ತರಿಸುತ್ತದೆ. ದೊಡ್ಡ ದೊಡ್ಡ ಮಹಾನಗರಗಳಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಂತ್ರಿಗಳು, ಸಂಸದರು, ಶಾಸಕರು, ಎಲ್ಲಾ ಹಂತದ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಒಗ್ಗೂಡಿ ಕಾರ್ಯನಿರ್ವಹಿಸಿದರೆ ಇಂತಹ ಘಟನೆಗಳು ಮರುಕಳಿಸದ ಹಾಗೇ ನೋಡಿಕೊಳ್ಳಬಹುದ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...