ಬೆಂಗಳೂರು : ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದೆ.
ಬಿಜೆಪಿ-ಜೆಡಿಎಸ್ ಷಡ್ಯಂತ್ರ ಹಾಗೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಹಮ್ಮಿಕೊಂಡಿದ್ದ “ರಾಜಭವನ ಚಲೋ” ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಮಾಡುವುದು ತಪ್ಪು. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ. ಇದು ಯಾವ ರೀತಿಯ ನ್ಯಾಯ. ಕಾನೂನಿನ ವಿರುದ್ಧವಾಗಿ ರಾಜ್ಯಪಾಲರು ಕೆಲಸ ಮಾಡುವುದಲ್ಲ, ಕಾನೂನಿನ ಪರವಾಗಿ ಅವರು ಕೆಲಸ ಮಾಡಬೇಕು. ಅಲ್ಲದೆ ಸಂವಿಧಾನವನ್ನು ರಕ್ಷಣೆ ಮಾಡಬೇಕು. ರಾಜ್ಯಪಾಲರ ಕಚೇರಿ ಸಮಾನತೆಗೆ ಹೆಸರಾಗಿರಬೇಕು. ಹಾಗಾಗಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ನಮ್ಮ ಈ ಹೋರಾಟ ನಿರಂತರ ಎಂದು ಹೇಳಿದರು.