ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೆಸರು ದುರುಪಯೋಗಪಡಿಸಿಕೊಂಡ ಆರೋಪಿಯನ್ನು ತುಮಕೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಯಲಹಂಕದ ಮಾರುತಿ ಬಂಧಿತ ಆರೋಪಿ. ಸಚಿವ ಡಾ.ಜಿ. ಪರಮೇಶ್ವರ್ ಅವರ ಹೆಸರು ದುರುಪಯೋಗ ಮಾಡಿಕೊಂಡು ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ವಿಐಪಿ ಪಾಸ್ ಕೊಡಿಸುತ್ತಿದ್ದ ಆರೋಪದ ಮೇಲೆ ಮಾರುತಿಯನ್ನು ಬಂಧಿಸಲಾಗಿದೆ.
ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ನಾಗಣ್ಣ ಅವರು ನೀಡಿದ ದೂರಿನ ಮೇರೆಗೆ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.