ಜನರು ಆಹಾರದ ರುಚಿಯನ್ನು ಹೆಚ್ಚಿಸಲು ಕರಿಬೇವಿನ ಎಲೆಗಳನ್ನು ಬಳಸುತ್ತಾರೆ. ಆದರೆ ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ನಿಮ್ಮ ತೂಕವನ್ನು ಕೂಡ ಕಡಿಮೆ ಮಾಡಲು ಸಹಕಾರಿಯಾಗಿದೆ. ಹಾಗಾದ್ರೆ ತೂಕ ನಷ್ಟಕ್ಕೆ ಕರಿಬೇವನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಯೋಣ.
ಕರಿಬೇವಿನ ಕಷಾಯ ತಯಾರಿಸಿ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ. 2 ಕಪ್ ನೀರನ್ನು ಬಿಸಿ ಮಾಡಿ ಕಡಿಮೆ ಉರಿಯಲ್ಲಿ ಬಿಸಿ ಮಾಡಿ ಅದಕ್ಕೆ 8-10 ಕರಿಬೇವಿನ ಎಲೆಗಳನ್ನು ಹಾಕಿ. ಇದಕ್ಕೆ ಸಣ್ಣ ತುಂಡು ಶುಂಠಿಯನ್ನು ಸೇರಿಸಿ 20 ನಿಮಿಷಗಳ ಕಾಲ ಕುದಿಸಿ. ಬಳಿಕ ಅದನ್ನು ಸೋಸಿ ತಣ್ಣಗಾದ ಮೇಲೆ ಜೇನುತುಪ್ಪ ಅಥವಾ ನಿಂಬೆ ರಸ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ತೂಕ ನಷ್ಟವಾಗುತ್ತದೆ.
ಅಷ್ಟೇ ಅಲ್ಲದೇ ಇದನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ನಿವಾರಣೆಯಾಗುತ್ತದೆ. ಮಲಬದ್ಧತೆ, ಆಮ್ಲೀಯತೆ, ಹೊಟ್ಟೆ ನೋವು, ಅಜೀರ್ಣ ಇತ್ಯಾದಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಲ್ಲದೇ ಇದರಲ್ಲಿ ವಿಟಮಿನ್ ಸಿ ಮತ್ತು ಕಬ್ಬಿಣಾಂಶ ಇರುವುದರಿಂದ ಇದು ದೇಹದಲ್ಲಿ ರಕ್ತಹೀನತೆ ಸಮಸ್ಯೆಯನ್ನು ನಿವಾರಿಸುತ್ತದೆ.