
ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಇಂದು ಬೆಳಗ್ಗೆ ಚೆನ್ನೈನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದ್ದಾರೆ. ಸ್ಟಾಲಿನ್ ಅವರೊಂದಿಗೆ 33 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಮೇ 2 ರಂದು ಪ್ರಕಟವಾಗಿದ್ದು, 234 ಕ್ಷೇತ್ರಗಳಲ್ಲಿ 159 ಸ್ಥಾನ ಗಳಿಸಿದ್ದ ಡಿಎಂಕೆ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ನೂತನ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿ ಹಿರಿಯರು, ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.