alex Certify ಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು

ಕಲಬುರಗಿ: ಚಿಂಚೋಳಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರ ಮೀಸಲು ಪಡೆ ಹಾಗೂ ಸ್ಥಳೀಯ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಅವಿನಾಶ್ ಜಾಧವ್ ನಿನ್ನೆ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾಗ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ್ದಾರೆ. ತಡ ರಾತ್ರಿಯೇ 7 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...