ಕಲಬುರ್ಗಿ: ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ನನ್ನ ವಿರುದ್ಧ ಆರೋಪ ಮಾಡುವ ರೀತಿ ಮಾತನಾಡಿದ್ದಾರೆ. ಅವರ ಆರೋಪದ ಬಗ್ಗೆ ಉನ್ನತಮಟ್ಟದ ತನಿಖೆಯಾಗಬೇಕು ಎಂದು ಶಾಸಕ ಬಿ.ಆರ್.ಪಾಟೀಲ್ ಆಗ್ರಹಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಆರ್.ಪಾಟೀಲ್, ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗುವವರೆಗೂ ಸದನಕ್ಕೆ ಹೋಗಲ್ಲ. ಅಧಿವೇಶನದಲ್ಲೂ ಭಾಗಿಯಾಗಲ್ಲ ಎಂದು ತಿಳಿಸಿದ್ದಾರೆ.
ನಾನು ಸ್ವಾಭಿಮಾನದಿಂದ ಬದುಕ್ಕಿದ್ದವನು. ಸ್ವಾಭಿಮಾನ ಇಲ್ಲದಿದ್ದರೆ ಬದುಕಿದ್ದೂ ಸತ್ತಂತೆ . ಇಂದು ಸಿಎಂ ಸಭೆ ಕರೆದಿದ್ದಾರೆ. ನಾನು ಮಧ್ಯಾಹ್ನ ಬೆಂಗಳೂರಿಗೆ ಹೋಗುತೇನೆ. ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡುತ್ತೇನೆ. ಅವರು ಅಧಿಕಾರಿಗಳನ್ನು ಕರೆದು ಮಾತನಾಡಲಿ. ನಾನು ತಪ್ಪು ಮಾಡಿದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.
ಸಚಿವ ಕೃಷ್ಣಬೈರೇಗೌಡ ಉತ್ತರ ಕೊಡುವಾಗ ನಾನು ಕಾಮಗಾರಿಗಳ ಬಗ್ಗೆ ಪ್ರಶ್ನೆ ಕೇಳಿದ್ದೆ. ನಾನು ಹಣ ಪಡೆದು ಕೆಲಸ ಕೊಟ್ಟಿದ್ದೀನಿ ಅಂತ ಆರೋಪ ಮಾಡಿದ್ದಾರೆ. ಇದರ ವಿರುದ್ಧ ನಾನು ಪ್ರತಿಭಟಿಸಿದೆ. ನನ್ನ ಬೆಂಬಲಕ್ಕೆ ಇಬ್ಬರು ಶಾಸಕರ ಹೊರತು ಯಾರೂ ಬಂದಿಲ್ಲ ಎಂದು ಹೇಳಿದರು.