ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ಸಚಿವರು, ಶಾಸಕರೇ ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ, ಪವರ್ ಶೇರಿಂಗ್ ಬಗ್ಗೆ ಮಾತನಾಡುತ್ತಾ, ಸಿದ್ದರಾಮಯ್ಯ ಬಳಿಕ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ಬೇಡ್ವಾ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಬಳಿಕ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಬೇಕು? ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ? ಎಂದು ಪ್ರಶ್ನಿಸಿದರು. ಆದರೆ ಈ ಅವಧಿಯಲ್ಲೇ ಆಗ್ತಾರಾ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ಯಾರೋ ಹೇಳಿದರು ಎಂಬ ಕಾರಣಕ್ಕೆ ಹೇಳಿದವರನ್ನೆಲ್ಲ ಸಿಎಂ ಮಾಡಲು ಆಗಲ್ಲ. ಕೆಲವರು ಜಾತಿ ಅಭಿಮಾನದ ಕಾರಣಕ್ಕೆ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.