ಮೈಸೂರು: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವಿನಿಂದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪೋಲೋ ಆಸ್ಪತ್ರೆಯ ವೈದ್ಯರು ಮಹೇಶ್ ಅವರಿಗೆ ಆಂಜಿಯೋಗ್ರಾಂ ಮಾಡಿದ್ದು, ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಅವರಿಗೆ ಯಾವುದೇ ಸಮಸ್ಯೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.