
ಪುತ್ತೂರು: ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ನಿವಾರಣೆಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದ್ದಾರೆ.
ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಶಾಸಕರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕಾರಣಕ್ಕೆ ಸಭೆಯನ್ನು ಮೊಟಕುಗೊಳಿಸಲಾಗಿದೆ. ಶಾಸಕರು ಸಭೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಚುನಾವಣಾ ಅಧಿಕಾರಿಗಳಾದ ತಹಶೀಲ್ದಾರ್, ಪೊಲೀಸರು ಮತ್ತು ಇತರೆ ಅಧಿಕಾರಿಗಳು ಸಭೆಯ ಸ್ಥಳಕ್ಕೆ ಆಗಮಿಸಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ಸಭೆ ನಡೆಸದಂತೆ ಶಾಸಕರಿಗೆ ತಿಳಿಸಿದ್ದಾರೆ.
ಇದರಿಂದಾಗಿ ಸಭೆಯನ್ನು ಮೊಟಕುಗೊಳಿಸಲಾಗಿದ್ದು, ಶಾಸಕರ ಕಚೇರಿಗೆ ಬೀಗ ಹಾಕಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ದೂರು ದಾಖಲಾಗಿದೆ.