alex Certify ನೀತಿ ಸಂಹಿತೆ ಉಲ್ಲಂಘಿಸಿ ಸಭೆ: ಶಾಸಕರ ಕಚೇರಿಗೆ ಬೀಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆ ಉಲ್ಲಂಘಿಸಿ ಸಭೆ: ಶಾಸಕರ ಕಚೇರಿಗೆ ಬೀಗ

ಪುತ್ತೂರು: ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ನಿವಾರಣೆಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದ್ದಾರೆ.

ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಶಾಸಕರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕಾರಣಕ್ಕೆ ಸಭೆಯನ್ನು ಮೊಟಕುಗೊಳಿಸಲಾಗಿದೆ. ಶಾಸಕರು ಸಭೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಚುನಾವಣಾ ಅಧಿಕಾರಿಗಳಾದ ತಹಶೀಲ್ದಾರ್, ಪೊಲೀಸರು ಮತ್ತು ಇತರೆ ಅಧಿಕಾರಿಗಳು ಸಭೆಯ ಸ್ಥಳಕ್ಕೆ ಆಗಮಿಸಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ಸಭೆ ನಡೆಸದಂತೆ ಶಾಸಕರಿಗೆ ತಿಳಿಸಿದ್ದಾರೆ.

ಇದರಿಂದಾಗಿ ಸಭೆಯನ್ನು ಮೊಟಕುಗೊಳಿಸಲಾಗಿದ್ದು, ಶಾಸಕರ ಕಚೇರಿಗೆ ಬೀಗ ಹಾಕಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ದೂರು ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...