ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ನೋಟಿಸ್ ತಲುಪಿದ ಮೂರು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಖಾಸಗಿ, ಸರ್ಕಾರಿ ಜಮೀನಿನಲ್ಲಿ ಕಲ್ಲು ತೆಗೆದ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ವರದಿಯಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಗಾಗಲೇ ಉಳಿದ ಮೂವರ ವಿಚಾರಣೆ ನಡೆಸಿರುವ ಪೊಲೀಸರು ಇದೀಗ ವಿಚಾರಣೆಗೆ ಆಗಮಿಸುವಂತೆ ಶಾಸಕ ಮುನಿರತ್ನರಿಗೆ ನೋಟಿಸ್ ನೀಡಿದ್ದಾರೆ. ಇಂದು ಅಥವಾ ನಾಳೆ ಮುನಿರತ್ನ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.