ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರಗೆ ಇಡಿ (ಜಾರಿ ನಿರ್ದೇಶನಾಲಯ) ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಶಾಸಕ ನಾಗೇಂದ್ರ ಅವರ ಇಡಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು ಇನ್ನಷ್ಟು ದಿನಗಳ ಕಾಲ ಕಸ್ಟಡಿಗೆ ಕೇಳಿ ಮನವಿ ಮಾಡಿದ್ದರು.
ಅಧಿಕಾರಿಗಳ ಮನವಿ ಆಲಿಸಿದ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಶಾಸಕ ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.