alex Certify BIG NEWS: 24 ಗಂಟೆ ಕಳೆದರೂ ನಿಲ್ಲದ ಇಡಿ ಪರಿಶೀಲನೆ; ಶಾಸಕ ಭರತ್ ರೆಡ್ಡಿ ನಿವಾಸದ ಮೇಲೆ ಮುಂದುವರೆದ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆ ಕಳೆದರೂ ನಿಲ್ಲದ ಇಡಿ ಪರಿಶೀಲನೆ; ಶಾಸಕ ಭರತ್ ರೆಡ್ಡಿ ನಿವಾಸದ ಮೇಲೆ ಮುಂದುವರೆದ ದಾಳಿ

ಬಳ್ಳಾರಿ: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ ಮುಂದುವರೆದಿದೆ. ಭರತ್ ರೆಡ್ಡಿ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಶನಿವಾರ ಬೆಳಿಗ್ಗೆ ದಾಳಿ ನಡೆಸಿದ್ದರು. ದಾಳಿ ಇಂದು ಕೂಡ ಮುಂದುವರೆದಿದೆ.

ಶನಿವಾರ ಬೆಳಿಗ್ಗೆ 6:30ಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು 24 ಗಂಟೆ ಮೇಲಾದರೂ ಪರಿಶೀಲನೆ ನಿಲ್ಲಿಸಿಲ್ಲ. ದಾಳಿ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಭರತ್ ರೆಡ್ಡಿ ಆಪ್ತರು, ಸಂಬಂಧಿಕರ ಮನೆಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭರತ್ ರೆಡ್ಡಿ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಅವರ ಆಪ್ತ ರತ್ನ ಬಾಬು, ಸತೀಶ್ ರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...