ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣ ಪಂಚಾಯಿತಿ ಸದಸ್ಯ ಸೋಮೇಶ್ವರ ನಾಯ್ಕ್ ಅವರು ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಶಾಸಕ ಶಿವರಾಂ ಹೆಬ್ಬಾರ್ ಅವರ ಬಗ್ಗೆ ಅವಾಚ್ಯ ಪದ ಬಳಸಿ ನಿಂದನಾತ್ಮಕ ಪೋಸ್ಟ್ ಹಾಕಿದ್ದರು. ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಬಗ್ಗೆ ಅವರ ಬೆಂಬಲಿಗ ಬಾಲಕೃಷ್ಣ ನಾಯ್ಕ್ ದೂರು ನೀಡಿದ್ದು, ಈ ಬಗ್ಗೆ ಯಲ್ಲಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.