alex Certify BREAKING : ‘MLA’ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್ : ಅಭಿನವ ಹಾಲಶ್ರೀ ಕಾರು ಚಾಲಕ ‘ಸಿಸಿಬಿ’ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘MLA’ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್ : ಅಭಿನವ ಹಾಲಶ್ರೀ ಕಾರು ಚಾಲಕ ‘ಸಿಸಿಬಿ’ ವಶಕ್ಕೆ

MLA ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ  ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರು ಚಾಲಕನನ್ನ ವಿಚಾರಣೆ ನಡೆಸಿದರೆ ಹಾಲಶ್ರೀ ಶ್ರೀಗಳ ಸುಳಿವು ಸಿಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಚಾಲಕನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಕಚೇರಿಗೆ ಕರೆ ತರುತ್ತಿದ್ದಾರೆ ಎಂದು ತಿಳಿದು ಬಂದಿದೆ.ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಸದ್ಯ ಆಸ್ಪತ್ರೆಯಲ್ಲಿದ್ದಾರೆ.

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬರೋಬ್ಬರಿ 5 ಕೋಟಿ ವಂಚಿಸಿತ್ತು. ಕಬಾಬ್ ಮಾರುವ ವ್ಯಕ್ತಿ, ಸಲೂನ್ ಮೇಕಪ್ ಮ್ಯಾನ್ ಹಾಗೂ ಇನ್ನೋರ್ವನಿಗೆ ಆರ್.ಎಸ್.ಎಸ್ ಮುಖಂಡನ ವೇಷ, ಬಿಜೆಪಿ ಕೇಂದ್ರ ನಾಯಕರ ವೇಷ ತೊಡಿಸಿ ನಾಟಕವಾಡಲು ರಂಗತಾಲೀಮು ನಡೆಸಿ ಉದ್ಯಮಿಯನ್ನು ವಂಚಿಸಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...