alex Certify MLC ಚುನಾವಣೆ ಹಿನ್ನೆಲೆಯಲ್ಲಿ ಈ 11 ಜಿಲ್ಲೆಗಳ ಅರ್ಹ ಮತದಾರರಿಗೆ ಸಿಗಲಿದೆ ‘ರಜೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

MLC ಚುನಾವಣೆ ಹಿನ್ನೆಲೆಯಲ್ಲಿ ಈ 11 ಜಿಲ್ಲೆಗಳ ಅರ್ಹ ಮತದಾರರಿಗೆ ಸಿಗಲಿದೆ ‘ರಜೆ’

ಜೂನ್ 13ರಂದು ವಿಧಾನ ಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅರ್ಹ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ ಅರ್ಹ ಮತದಾರರಿಗೆ ಈ ರಜೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ 11 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾಯಂ ಅಥವಾ ಅರೆಕಾಲಿಕ ಕೆಲಸ ಮಾಡುತ್ತಿರುವ ಮತದಾನಕ್ಕೆ ಅರ್ಹರಿರುವ ಪದವೀಧರರು ಹಾಗೂ ಶಿಕ್ಷಕರಿಗೆ ಈ ವಿಶೇಷ ಸಾಂದರ್ಭಿಕ ರಜೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...