ಹಾಸನ: ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಕೋಮುಗಲಭೆ ಹುಟ್ಟು ಹಾಕಲು ಕಾರಣರಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಗೊಂದಲ ನಿರ್ಮಾಣವಾಗಿದೆ. ಹಾಗಾಗಿ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ನೀವು ವಕೀಲರಿದ್ದೀರಿ, ನೀವೇ ಹೇಳಿ. ಸಂವಿಧಾನಕ್ಕೆ ಮೀರಿದ ಕಾಯ್ದೆಯನ್ನು ನೀವು ಸಮರ್ಥನೆ ಮಾಡ್ತೀರಾ? ನಿಮಗೆ ಷರಿಯಾ ಮುಖ್ಯ ಆಗುತ್ತದೆಯೋ ಸಂವಿಧಾನ ಮುಖ್ಯ ಆಗುತ್ತದೆಯೋ? ಷರಿಯಾ ಮುಖ್ಯ ಅಲ್ಲ, ಸಂವಿಧಾನ ಮುಖ್ಯ ಎನ್ನುವುದಾದರೆ ಸಂವಿಧಾನದ ಪರ ನಿಮ್ಮ ಬದ್ಧತೆಯನ್ನು ಪ್ರಕಟಿಸಿ ಎಂದು ಆಗ್ರಹಿಸುತ್ತೇನೆ ಎಂದು ಸಿ.ಟಿ. ರವಿ ಹೇಳಿದ್ದಾರೆ.