ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ 7 ಸ್ಥಾನಗಳಿಗೆ ಮುಂದಿನ ವರ್ಷ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರಿಗೆ ಟಿಕೆಟ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಕಾಂಕ್ಷಿಗಳು ಒಟ್ಟಿಗೆ ಕೆಲಸ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಶಾಸಕರು, ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಪಡೆದುಕೊಂಡು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು. ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.