
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದಿಂದ ಎಂ.ವಿ. ರವಿಶಂಕರ್, ವಾಯುವ್ಯ ಪದವೀಧರ ಕ್ಷೇತ್ರದಿಂದ ಹನುಮಂತ ನಿರಾಣಿ, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಅರುಣ ಶಹಾಪುರ ಅವರಿಗೆ ಟಿಕೆಟ್ ನೀಡಲಾಗಿದೆ.
ವಿಧಾನಪರಿಷತ್ 4 ಕ್ಷೇತ್ರಗಳ ಚುನಾವಣೆಗೆ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇಬ್ಬರು ಹಾಲಿ ಪರಿಷತ್ ಸದಸ್ಯರಿಗೆ ಅವಕಾಶ ನೀಡಲಾಗಿದೆ. ಪಶ್ಚಿಮ ಕ್ಷೇತ್ರಕ್ಕೆ ಹೆಸರು ಘೋಷಣೆ ಮಾಡಿಲ್ಲ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಕರೆತರುವ ಪ್ರಯತ್ನ ನಡೆದಿದೆ. ಜೂನ್ ನಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ.
ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು:
ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಮಾದೇಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಕೆ. ರಾಮು ಕಣಕ್ಕಿಳಿಯಲಿದ್ದಾರೆ.
