ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.
ಮಾಜಿ ಸಚಿವ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ.
ಸುಮಲತಾ ಅಂಬರೀಶ್ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ. ಸಿ.ಟಿ. ರವಿ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಒಕ್ಕಲಿಗ, ಗಂಗಾಮತಸ್ಥ, ಮರಾಟ ಸಮುದಾಯಕ್ಕೆ ಮಣೆ ಹಾಕಲಾಗಿದೆ.