
ಬೆಂಗಳೂರು: ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಒಂದು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಜಯಗಳಿಸಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಿಂದ ಪ್ರೊ.ಎಸ್.ವಿ. ಸಂಕನೂರ ಗೆಲುವು ಸಾಧಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಜಯಗಳಿಸಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಮುನ್ನಡೆ ಗಳಿಸಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್, ಜೆಡಿಎಸ್ ಅಭ್ಯರ್ಥಿ ತೂಪಲ್ಲಿ ಚೌಡರೆಡ್ಡಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಹಿನ್ನಡೆಯಲ್ಲಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.