
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು.
ವಿಧಾನಸಭೆಯ ಶಾಸಕರು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ 11 ಸ್ಥಾನಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ಸೋಮವಾರ ಅಧಿಸೂಚನೆ ಪ್ರಕಟಿಸಲಾಗುವುದು. 11 ಮಂದಿ ಸದಸ್ಯರ ಅವಧಿ ಮುಂದಿನ ತಿಂಗಳು ಜೂನ್ 17ರಂದು ಮುಕ್ತಾಯವಾಗಲಿದೆ.
ಸೋಮವಾರ ಅಧಿಸೂಚನೆ ಪ್ರಕಟಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಜೂನ್ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ಜೂನ್ 6 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 13ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಸಲಾಗುವುದು.