alex Certify ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇಂದು ವಿಧಾನ ಪರಿಷತ್ 6 ಸ್ಥಾನಕ್ಕೆ ಚುನಾವಣೆ ಅಧಿಸೂಚನೆ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇಂದು ವಿಧಾನ ಪರಿಷತ್ 6 ಸ್ಥಾನಕ್ಕೆ ಚುನಾವಣೆ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಇಂದು ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಪ್ರಕಟಿಸಲಾಗುವುದು.

ಮೂರು ಪದವೀಧರ, ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ. ಜೂನ್ 3ರಂದು ಮತದಾನ, ಜೂನ್ 6ರಂದು ಮತ ಎಣಿಕೆ ನಡೆಯಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಮೇ 16 ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಈಶಾನ್ಯ ಪದವೀಧರ, ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ಕರ್ನಾಟಕದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...