
ಕಲಬುರಗಿ -ಯಾದಗಿರಿ ವಿಧಾನಪರಿಷತ್ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಗೌಪ್ಯ ಮತದಾನದ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.
ನನ್ನ ಮತ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ ಪರವಾಗಿ ಚಲಾವಣೆ ಮಾಡಿದ್ದೇನೆ ಎಂದು ಬಿ.ಜಿ. ಪಾಟೀಲ್ ಅವರಿಗೆ ಮತ ಚಲಾವಣೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಮತ ಹಾಕಿದ ಬಗ್ಗೆ ಜಾಧವ್ ಪೋಸ್ಟ್ ಹಾಕುವ ಮೂಲಕ ತಾವು ಯಾರಿಗೆ ವೋಟ್ ಹಾಕಿದ್ದೇನೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.