alex Certify BIG NEWS: ಹೈವೋಲ್ಟೇಜ್ ಪರಿಷತ್ ಚುನಾವಣೆಗೆ ಇಂದು ಮತದಾನ, ಜೂ. 15 ರಂದು ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೈವೋಲ್ಟೇಜ್ ಪರಿಷತ್ ಚುನಾವಣೆಗೆ ಇಂದು ಮತದಾನ, ಜೂ. 15 ರಂದು ಫಲಿತಾಂಶ

ಬೆಂಗಳೂರು: ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ಜೂನ್ 15 ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು 8 ಗಂಟೆಯಿಂದ ಮತದಾನ ಆರಂಭವಾಗಿದೆ. ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರ ಮತ್ತು ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆಯಲಿದ್ದು, ಕಣದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ 49 ಅಭ್ಯರ್ಥಿಗಳಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಸವರಾಜ ಹೊರಟ್ಟಿ, ಕಾಂಗ್ರೆಸ್ನಿಂದ ಬಸವರಾಜ ಗುರಿಕಾರ ಹಾಗೂ ಜೆಡಿಎಸ್ ನಿಂದ ಶ್ರೀಶೈಲ ಗಡದಿನ್ನಿ ಸ್ಪರ್ಧಿಸಿದ್ದಾರೆ.

ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರುಣ ಶಹಾಪುರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ ಹುಕ್ಕೇರಿ, ಜೆಡಿಎಸ್ ಅಭ್ಯರ್ಥಿಯಾಗಿ ಚಂದ್ರಶೇಖರ ಲೋಣಿ ಸ್ಪರ್ಧಿಸಿದ್ದಾರೆ.

ವಾಯುವ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹನುಮಂತ ನಿರಾಣಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರವಿಶಂಕರ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಮಾದೇಗೌಡ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಕೆ. ರಾಮು ಸ್ಪರ್ಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...