
ಬೆಳಗಾವಿ: ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ತಮ್ಮ ಹುಟ್ಟುಹಬದ ನಿಮಿತ್ತ ಆಯೋಜಿಸಿದ್ದ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ವ್ಯಕ್ತಿಯೋರ್ವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಿಕವಾಡ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ್ ಹುಕ್ಕೇರಿ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ಖಾಲಿ ಬಂಡಿ ಓಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.. ಸ್ಪರ್ಧೆ ನೋಡಲು ರಾಜ್ಯ ಮಾತ್ರವಲ್ಲ ಮಹಾರಾಷ್ಟ್ರದಿಂದಲೂ ಅಪಾರಪ್ರಮಾಣದಲ್ಲಿ ಜನರು ಆಗಮಿಸಿದ್ದರು. ನಿರೀಕ್ಷೆಗೂ ಮೀಪಿ ಜನಸ್ತೋಮ ಬಂದಿದ್ದರಿಂದ ಜನರನ್ನು ನಿಯಂತ್ರಿಸುವುದೇ ಹರಸಾಹಸವಾಗಿತ್ತು. ಈ ವೇಳೆ ಸರಿಯಾದ ಸಮಯಕ್ಕೆ ಸ್ಪರ್ಧೆ ಆರಂಭವಾಗದೇ ಸಮಯದಲ್ಲಿ ಸ್ವಲ್ಪ ಹೆಚ್ಚುಕಮ್ಮಿಯಾಗಿದೆ. ಈ ವೇಳೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಸಂಬಾಜಿ ಎಂಬ ವ್ಯಕ್ತಿ ಪ್ರಶ್ನೆ ಮಾಡಿದ್ದಾನೆ.
ಇದರಿಂದ ಕೋಪಗೊಂಡ ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ಆತನನ್ನು ವೇದಿಕೆಗೆ ಕರೆದು ಕತ್ತಿನಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ್ದಾರೆ. ಎಂಎಸ್ ಸಿ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.