
ಬೆಂಗಳೂರಿನ ಹೆಬ್ಬಾಳದ ಬಿಎಂಟಿಸಿ ಡಿಪೋ ಬಳಿ ಎಂಎಲ್ಸಿ ಪುತ್ರ ಮತ್ತು ಆತನ ಸ್ನೇಹಿತರು ಅಮೃತಹಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರೊಬ್ಬರ ಪುತ್ರ ಮತ್ತು ಆತನ ಸ್ನೇಹಿತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮದ್ಯ ಸೇವನೆ ಮಾಡಿ ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಮೂವರನ್ನು ಅಮೃತಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.