alex Certify ಶಾಕಿಂಗ್ ನ್ಯೂಸ್: ಮೆಕ್ಕೆಜೋಳದ ಹೊಲದಲ್ಲಿ ಹಾಡಹಗಲೇ ಘೋರ ಕೃತ್ಯ, ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಮೆಕ್ಕೆಜೋಳದ ಹೊಲದಲ್ಲಿ ಹಾಡಹಗಲೇ ಘೋರ ಕೃತ್ಯ, ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.

ಶುಕ್ರವಾರ ಹಾಡಹಗಲಲ್ಲೇ ಘಟನೆ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. 13 ವರ್ಷದ ಬಾಲಕಿ ಗ್ರಾಮದ ಹೊರವಲಯದಲ್ಲಿ ಬಹಿರ್ದೆಸೆಗೆಂದು ಮನೆಯಿಂದ ತೆರಳಿದ್ದಾಳೆ. ಆದರೆ, ಆಕೆ ಬಹಳ ಹೊತ್ತಿನವರೆಗೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ. ಹುಡುಕಾಟದ ವೇಳೆ ಮೆಕ್ಕೆಜೋಳದ ಜಮೀನಿನಲ್ಲಿ ವಿವಸ್ತ್ರವಾಗಿದ್ದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಕಂಡು ಬಂದಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...