ಕೊರೊನಾ ಸೋಂಕಿನ ಮೂರನೇ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಮಾಸ್ಕ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಸಾರ್ವಜನಿಕರಿಗೆ ಪದೇ ಪದೇ ಜ್ಞಾಪಿಸಲಾಗುತ್ತಿದೆ. ಈ ನಡುವೆ ಮುಂಬೈನ ಜುಹು ಎಂಬಲ್ಲಿ ಮಾಸ್ಕ್ ಧರಿಸದ ವ್ಯಕ್ತಿಯಿಂದ ದಂಡ ಸಂಗ್ರಹ ಮಾಡಲು ಮುಂದಾದ ಮಾರ್ಷಲ್ಗೆ ಥಳಿಸಿದ ಘಟನೆಯು ಬೆಳಕಿಗೆ ಬಂದಿದೆ.
ಸೋಮವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎಂದು ವಾರ್ಡ್ನ ಘನ ತ್ಯಾಜ್ಯ ವಿಭಾಗದ ನಾಗರಿಕ ಅಧಿಕಾರಿ ಮಾಹಿತಿ ನೀಡಿದ್ರು. ಮಾಸ್ಕ್ ಧರಿಸದ ಕಾರಣಕ್ಕೆ ದಂಡ ನೀಡಲು ನಿರಾಕರಿಸುವವರ ಫೋಟೋ ತೆಗೆದುಕೊಳ್ಳುವಂತೆ ನಾವು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದ್ರು.
ಈ ವರ್ಷದ ಆರಂಭದಲ್ಲೂ ಸಹ ಕೊರೊನಾ ಪ್ರಕರಣಗಳು ಮಿತಿಮೀರುತ್ತಿದ್ದ ಸಂದರ್ಭದಲ್ಲಿ ಮುಂಬೈನ ಕಾಂಡಿವಲಿ ಪ್ರದೇಶದಲ್ಲಿ ಮಾಸ್ಕ್ ಇಲ್ಲದ ಮಹಿಳೆಯನ್ನು ತಡೆಯಲು ಯತ್ನಿಸಿದ ಬಿಎಂಸಿ ಅಧಿಕಾರಿಗೆ ಥಳಿಸಿದ ಘಟನೆ ವರದಿಯಾಗಿತ್ತು. ಈ ಘಟನೆಯ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿತ್ತು.